ಐಪಿಎಲ್ ಹಣಾಹಣಿ: ಡೆಲ್ಲಿ ಕ್ಯಾಪಿಟಲ್ಸ್ ಗೆ ಶರಣಾದ ಚೆನ್ನೈ ಸೂಪರ್ ಕಿಂಗ್ಸ್
ದುಬೈ, ಸೆ.25: ಐಪಿಎಲ್ ಟ್ವೆಂಟಿ-20 ಟೂರ್ನಿಯ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 44 ರನ್ ಗಳಿಂದ ಸೋತಿದ್ದು, ಸತತ ಎರಡು ಪಂದ್ಯಗಳನ್ನು ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಅಗ್ರಸ್ಥಾನಕ್ಕೆ ತಲುಪಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಡೆಲ್ಲಿ ತಂಡ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ 175 ರನ್ ಗಳಿಸಿತ್ತು. ಆರಂಭಿಕ ಆಟಗಾರ ಪೃಥ್ವಿ ಶಾ ಅರ್ಧಶತಕ ಗಳಿಸಿದ್ದರು. ಗೆಲುವಿಗೆ 176 ರನ್ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಚೆನ್ನೈ ಪರ ಡುಪ್ಲೆಸಿಸ್ 43(35 ಎಸೆತ), ಕೇದಾರ್ ಜಾದವ್ 26 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ವೇಗಿ ಕಾಗಿಸೋ ರಬಾಡ 3 ವಿಕೆಟ್ ಪಡೆದು ಮಿಂಚಿದರು.
Next Story