ಮೈಸೂರು: ಪತ್ರಕರ್ತರಿಗೆ ‘ಆಯುಷ್ಮಾನ್' ಆರೋಗ್ಯ ಕಾರ್ಡ್ ವಿತರಣೆ
ಮೈಸೂರು, ಸೆ.27: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಪತ್ರಕರ್ತರಿಗೆ ನೀಡುವ ಆರೋಗ್ಯ ಕಾರ್ಡ್ ಅನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ರವಿವಾರ ವಿತರಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಶರತ್ ಬಿ. ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್. ರಾಜು ಉಪಸ್ಥಿತರಿದ್ದರು.
Next Story