ಅ.1ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಸೆ.28: ರಾಜ್ಯದಲ್ಲಿ ಸೆ.28ರ ಸೋಮವಾರದಿಂದ ಅ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.30 ಹಾಗೂ ಅ.1ರಂದು ರಾಜ್ಯದ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸೆ.28ರಿಂದ ಅ.1 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Next Story