ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳು ರೈತರ ಪರವಾಗಿವೆ: ನಳಿನ್ ಕುಮಾರ್ ಕಟೀಲು
ರಾಯಚೂರು, ಸೆ.28: ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳು ರೈತರ ಪರವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗಳು ರೈತರ ಹಿತದೃಷ್ಟಿಯಿಂದ ಮಾಡಿರುವ ಕಾಯ್ದೆಗಳಾಗಿವೆ ಎಂದು ಹೇಳಿದರು.
ಭೂಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳು ರೈತರ ಪರವಾಗಿವೆ. ನಾನೂ ರೈತನಾಗಿದ್ದು, ರೈತನಿಗೆ ಅನುಕೂಲವಾಗುವ ಕಾಯ್ದೆಯಾಗಿದೆ. ರೈತನ ಹೆಸರಿನಲ್ಲಿ ಈಗ ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿ ಮತ್ತು ಯಡಿಯೂರಪ್ಪ ಸರಕಾರ ರೈತ ಪರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
Next Story