ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ
ಬೆಂಗಳೂರು, ಜೂ.20: ರಾಜ್ಯ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸಂಪುಟದಿಂದ ಕೈಬಿಡಲಾಗಿದ್ದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಉನ್ನತ ಹುದ್ದೆ ಲಭಿಸಿದೆ. ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ದಿನೇಶ್ ಗುಂಡೂರಾವ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಆದೇಶ ಹೊರಡಿಸಿದ್ದಾರೆ.
Next Story