ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ
ಹುಣಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್-ಲಾರಿ ಮುಖಾಮುಖಿ ಢಿಕ್ಕಿ
ಮೈಸೂರು, ಅ.26: ಇಲ್ಲಿನ ಹುಣಸೂರಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ಪಪ್ಪಿದರೆ, 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ವಿರಾಜಪೇಟೆಯಿಂದ ಮೈಸೂರಿಗೆ ತೆರಳುತ್ತಿತ್ತು. ಲಾರಿ ಮೈಸೂರು ಕಡೆಯಿಂದ ಬರುತ್ತಿತ್ತು.
ಅಪಘಾತದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ, ಲಾರಿ ಚಾಲಕ, ಇನ್ನಿಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದರು. ಗಂಭೀರ ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಅಪಘಾತದಿಂದ ಗಾಯಗೊಂಡರನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.
Next Story