ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
ಸಾಗರ, ಮೇ 22: ಆನಂಧಪುರದ ಅಚಾಪುರ ಸಮೀಪ ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಫಾರ್ಮಾನ್ (28) ಎಂಬವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಸಹ ಸವಾರ ಮಕ್ಸೂತ್ ಎಂಬವರು ತೀವ್ರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story