ಮಡಿಕೇರಿಯಲ್ಲಿ ದಟ್ಟ ಮಂಜು : ಸಾಧಾರಣ ಮಳೆ
ಮಡಿಕೇರಿ,ಜೂ.30 :ಜಿಲ್ಲೆಯಾದ್ಯಂತ ಮಳೆಯ ಪ್ರಮಾಣ ಶುಕ್ರವಾರ ಕೂಡ ಕಡಿಮೆ ಇತ್ತು. ಮಡಿಕೇರಿಯಲ್ಲಿ ಒಂದೆರಡು ಮಳೆಯೊಂದಿಗೆ ದಟ್ಟ ಮಂಜು ಕವಿದ ವಾತಾವರಣ ಮತ್ತು ಚಳಿಯೂ ಇದೆ.
ಮುಂಗಾರು ಮಳೆಯ ಸೊಬಗನ್ನು ಸವಿಯಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ.
ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 18.2 ಮಿ.ಮೀ. ಕಳೆದ ವರ್ಷ ಇದೇ ದಿನ 63.28 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 702.68 ಮೀ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 661.52 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 26.85 ಮಿ.ಮೀ. ಕಳೆದ ವರ್ಷ ಇದೇ ದಿನ 87.8 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 911.9 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1016.64 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.52 ಮಿ.ಮೀ. ಕಳೆದ ವರ್ಷ ಇದೇ ದಿನ 31.7 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 650.33 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 484.51 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.24 ಮಿ.ಮೀ. ಕಳೆದ ವರ್ಷ ಇದೇ ದಿನ 70.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 524.47 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 483.42 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:
ಮಡಿಕೇರಿ ಕಸಬಾ 18.8, ನಾಪೋಕ್ಲು 22.4, ಸಂಪಾಜೆ 22.6, ಭಾಗಮಂಡಲ 43.6, ವಿರಾಜಪೇಟೆ ಕಸಬಾ 18.8, ಹುದಿಕೇರಿ 15.7, ಶ್ರೀಮಂಗಲ 19.6, ಪೊನ್ನಂಪೇಟೆ 17, ಅಮ್ಮತ್ತಿ 15, ಬಾಳೆಲೆ 13, ಸೋಮವಾರಪೇಟೆ ಕಸಬಾ 21.06, ಶನಿವಾರಸಂತೆ 13, ಶಾಂತಳ್ಳಿ 13, ಕೊಡ್ಲಿಪೇಟೆ 13.2, ಕುಶಾಲನಗರ 1.2, ಸುಂಟಿಕೊಪ್ಪ 6 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2822.21 ಅಡಿಗಳು, ಕಳೆದ ವರ್ಷ ಇದೇ ದಿನ 2831.6 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 35.6 ಮಿ.ಮೀ., ಇಂದಿನ ನೀರಿನ ಒಳ ಹರಿವು 741 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 4177 ಕ್ಯೂಸೆಕ್.