ಗೃಹಿಣಿ ಆತ್ಮಹತ್ಯೆ
ಮಂಡ್ಯ,ಆ.12: ಕೌಟುಂಬಿಕ ಕಲಹ ಹಿನ್ನೆಲೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಅರಕೆರೆ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ.
ಸಣ್ಣಬೋರ ಎಂಬುವರ ಪತ್ನಿ ಜಯಕುಮಾರಿ (35) ಮೃತ ಗೃಹಿಣಿಯಾಗಿದ್ದಾರೆ.
ಈಕೆ ಸಣ್ಣಬೋರನೊಂದಿಗೆ 12 ವರ್ಷಗಳ ಹಿಂದೆ ಮದುವೆಯಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗಳ ನಡುವೆ ಆಗಾಗ್ಗೆ ಕುಟುಂಬ ಕಲಹ ಏರ್ಪಡುತ್ತಿದ್ದ ಕಾರಣ ಮನನೊಂದ ಜಯಕುಮಾರಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಶನಿವಾರ ಬೆಳಗಿನ ಜಾವ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಅರಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಅರಕೆರೆ ಗ್ರಾಮಾಂತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story