ದಾವಣಗೆರೆ: ಡೆಂಗ್ ಜ್ವರಕ್ಕೆ ಬಾಲಕ ಬಲಿ
ದಾವಣಗೆರೆ, ಸೆ.22: ಡೆಂಗ್ ಜ್ವರಕ್ಕೆ ಆರು ವರ್ಷದ ಬಾಲಕ ಬಲಿಯಾಗಿರುವ ಘಟನೆ ಶುಕ್ರವಾರ ಎಸ್ಜೆಎಂ ನಗರದಲ್ಲಿ ನಡೆದಿದೆ.
ಆಕಾಶ್ ಮೃತ ಬಾಲಕ ಎಂದು ಗುರುತಿಸಲಾಗಿದೆ.
ಎರಡು ದಿನಗಳಿಂದ ಡೆಂಗ್ ಜ್ವರದಿಂದ ಬಳಲುತ್ತಿದ್ದ ಮೃತ ಬಾಲಕನಿಗೆ ಚಿಕಿತ್ಸೆ ನೀಡಿ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಎಸ್ಜೆಎಂ ನಗರದಲ್ಲಿ ಅನೈರ್ಮಲ್ಯ ತಾಂಡವಾಡುತ್ತಿದ್ದು, ಡೆಂಗ್ ಕಾಯಿಲೆ ಬಗ್ಗೆ ಗಮನಹರಿಸದ ಪಾಲಿಕೆ ವಿರುದ್ಧ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಡೆಂಗ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೂಡಲೇ ಪಾಲಿಕೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
Next Story