ಕಾಮನ್ ವೆಲ್ತ್ ಗೇಮ್ಸ್ ಪ್ರವೇಶ ಪಟ್ಟಿಯಿಂದ ಸುಶೀಲ್ ಕುಮಾರ್ ಹೆಸರು ನಾಪತ್ತೆ
ಹೊಸದಿಲ್ಲಿ, ಮಾ.30: ಕಾಮನ್ ವೆಲ್ತ್ ಗೇಮ್ಸ್ ಆರಂಭವಾಗಲು ಇನ್ನು ಕೇವಲ 5 ದಿನಗಳಿರುವಂತೆಯೇ ಕುಸ್ತಿಪಟು ಸುಶೀಲ್ ಕುಮಾರ್ ಅವರ ಹೆಸರು ಪ್ರವೇಶ ಪಟ್ಟಿಯಿಂದ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುವಿನ ಹೆಸರು ಅಧಿಕೃತ ವೆಬ್ ಸೈಟ್ ನಿಂದ ನಾಪತ್ತೆಯಾಗಿದೆ. ಈ ಬಗ್ಗೆ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಹಾಗು ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ ಗೆ ಈ ಬಗ್ಗೆ ತಿಳಿದಿರಲಿಲ್ಲ ಎನ್ನಲಾಗಿದೆ.
ಸಂಘಟನಾ ಸಮಿತಿಯೊಂದಿಗೆ ಈ ವಿಚಾರದ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಹಾಗು ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್ ತಿಳಿಸಿದೆ.
Next Story