ಕೋಲ್ಕತಾ ನೈಟ್ ರೈಡರ್ಸ್ಗೆ ಜಯ
ಇಂದೋರ್, ಮೇ.12: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಐಪಿಎಲ್ನ 44ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 31ರನ್ಗಳ ಜಯ ಗಳಿಸಿದೆ
ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶನಿವಾರ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್ಗಳಲ್ಲಿ 8ವಿಕೆಟ್ ನಷ್ಟದಲ್ಲಿ 214 ರನ್ ಗಳಿಸಿತು.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆರಂಭಿಕ ದಾಂಡಿಗ ಲೋಕೇಶ್ ರಾಹುಲ್ 66 ರನ್(29ಎ, 2ಬೌ,7ಸಿ), ನಾಯಕ ರವಿಚಂದ್ರನ್ ಅಶ್ವಿನ್ 45ರನ್(22ಎ, 4ಬೌ,3ಸಿ), ಆ್ಯರೊನ್ ಫಿಂಚ್ 34 ರನ್ ಮತ್ತು ಕ್ರಿಸ್ ಗೇಲ್ 21 ರನ್ ಗಳಿಸಿದರು.
ಕೋಲ್ಕತಾ ನೈಟ್ ರೈಡರ್ಸ್ ತಂಡದ ರಸೆಲ್ 41ಕ್ಕೆ 3 ವಿಕೆಟ್ ಪಡೆದರು.
ಇದಕ್ಕೂ ಮೊದಲು ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 245 ರನ್ ಗಳಿಸಿತು
Next Story