ಪ್ರಥಮ ದರ್ಜೆ ಕ್ರಿಕೆಟ್ಗೆ ದಕ್ಷಿಣ ಆಫ್ರಿಕದ ಮಿಲ್ಲರ್ ವಿದಾಯ
ಕೇಪ್ಟೌನ್, ಸೆ.11: ದಕ್ಷಿಣ ಆಫ್ರಿಕದ ಮಧ್ಯಮ ಕ್ರಮಾಂಕದ ದಾಂಡಿಗ ಡೇವಿಡ್ ಮಿಲ್ಲರ್ ಮುಂದಿನ ವರ್ಷ ಇಂಗ್ಲೆಂಡ್ನಲ್ಲಿ ನಡೆಯುವ ಏಕದಿನ ವಿಶ್ವಕಪ್ನತ್ತ ಹೆಚ್ಚು ಗಮನ ನೀಡುವ ಉದ್ದೇಶದಿಂದ ಪ್ರಥಮ ದರ್ಜೆ ಕ್ರಿಕೆಟ್ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. 29ರ ಹರೆಯದ ಮಿಲ್ಲರ್ ಟ್ವೆಂಟಿ-20 ಕ್ರಿಕೆಟ್ನಲ್ಲಿ ಕೇವಲ 35 ಎಸೆತಗಳಲ್ಲಿ ಅತ್ಯಂತ ವೇಗವಾದ ಶತಕ ಸಿಡಿಸಿ ಜಂಟಿ ದಾಖಲೆ ನಿರ್ಮಿಸಿದ್ದರು. ಮಿಲ್ಲರ್ 63 ಪ್ರಥಮ ದರ್ಜೆ ಪಂದ್ಯಗಳಲ್ಲಿ ಒಟ್ಟು 3,342 ರನ್ ಗಳಿಸಿದ್ದಾರೆ. ಇದರಲ್ಲಿ 6 ಶತಕ ಹಾಗೂ 19 ಅರ್ಧಶತಕಗಳಿವೆ.
Next Story