ಬಿಸಿಸಿಐ ಮಾಜಿ ಅಧ್ಯಕ್ಷ ಬಿಸ್ವನಾಥ್ ದತ್ ನಿಧನ
ಕೋಲ್ಕತಾ, ಸೆ.24: ಬಿಸಿಸಿಐ ಮಾಜಿ ಅಧ್ಯಕ್ಷ ಬಿಸ್ವನಾಥ್ ದತ್ ಸೋಮವಾರ ಬೆಳಗ್ಗೆ 4 ಗಂಟೆಗೆ ಶ್ವಾಸಕೋಶ ಸೋಂಕಿನಿಂದಾಗಿ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ.
1982ರಿಂದ 88ರ ತನಕ ಬಿಸಿಸಿಐ ಉಪಾಧ್ಯಕ್ಷರಾಗಿದ್ದ ದತ್ 1989ರಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಖಿಲ ಭಾರತ ಫುಟ್ಬಾಲ್ ಒಕ್ಕೂಟದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾರ ಸಲಹೆಗಾರರೆಂದೇ ಕ್ರಿಕೆಟ್ ವಲಯದಲ್ಲಿ ಗುರುತಿಸಲ್ಪಟ್ಟಿದ್ದರು.
92 ವರ್ಷ ವಯಸ್ಸಿನ ದತ್ ಓರ್ವ ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.
Next Story