ಮೊದಲ ಟ್ವೆಂಟಿ-20: ಭಾರತ ಫೀಲ್ಡಿಂಗ್ ಆಯ್ಕೆ
ಬ್ರಿಸ್ಬೇನ್, ನ.21: ಆತಿಥೇಯ ಆಸ್ಟ್ರೇಲಿಯ ವಿರುದ್ಧ ಮೊದಲ ಟ್ವೆಂಟಿ-20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ಬುಧವಾರ ಟಾಸ್ ಜಯಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
3 ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಭಾರತ ಬೌಲಿಂಗ್ ವಿಭಾಗದಲ್ಲಿ ಮೂವರು ವೇಗಿಗಳಾದ ಭುವನೇಶ್ವರ ಕುಮಾರ್, ಜಸ್ಪ್ರಿತ್ ಬುಮ್ರಾ ಹಾಗೂ ಖಲೀಲ್ ಅಹ್ಮದ್ ಹಾಗೂ ಓರ್ವ ಸ್ಪಿನ್ನರ್ ಕುಲ್ದೀಪ್ ಯಾದವ್ರನ್ನು ಕಣಕ್ಕಿಳಿಸಿದೆ. ಆಲ್ರೌಂಡರ್ ಕೃನಾಲ್ ಪಾಂಡ್ಯ ಆಡುವ ಅವಕಾಶ ಪಡೆದಿದ್ದಾರೆ.
ಆಸ್ಟ್ರೇಲಿಯ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕ ವಿರುದ್ಧ ಸೋತ ಪಂದ್ಯದಲ್ಲಿ ಆಡಿದ್ದ ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ನಥಾನ್ ಕೌಲ್ಟರ್ ನೀಲ್ ಬದಲಿಗೆ ಲೆಗ್ ಸ್ಪಿನ್ನರ್ ಆ್ಯಡಮ್ ಝಾಂಪಾರನ್ನು ಆಡುವ ಬಳಗಕ್ಕೆ ಸೇರಿಸಿಕೊಂಡಿದೆ.
Next Story