ಪರ್ತ್ ಟೆಸ್ಟ್: ಬ್ಯಾಟಿಂಗ್ ಆಯ್ದುಕೊಂಡ ಆಸೀಸ್
ಪರ್ತ್, ಡಿ. 14: ಭಾರತ ವಿರುದ್ಧದ ಬಾರ್ಡರ್- ಗಾವಸ್ಕರ್ ಸರಣಿಯ ಮೊದಲ ಪಂದ್ಯ ಸೋತು ಒತ್ತಡದಲ್ಲಿರುವ ಆಸ್ಟ್ರೇಲಿಯಾ ತಂಡ, ಪರ್ತ್ನಲ್ಲಿ ಆರಂಭವಾದ ಎರಡನೇ ಟೆಸ್ಟ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತಕ್ಕೆ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ಹಾಗೂ ರೋಹಿತ್ ಶರ್ಮಾ ಸೇವೆ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಭಾರತ ತಂಡ ಯುವ ಆಟಗಾರ ಹನುಮ ವಿಹಾರಿ ಹಾಗೂ ಅನುಭವಿ ಬೌಲರ್ ಉಮೇಶ್ ಯಾದವ್ ಅವರನ್ನು ಅಂತಿಮವಾಗಿ ತಂಡಕ್ಕೆ ಸೇರಿಸಿಕೊಂಡಿದೆ.
ಅರಾನ್ ಫಿಂಚ್ (ಔಟಾಗದೇ 14) ಮತ್ತು ಮಾರ್ಕ್ಯೂಸ್ ಹ್ಯಾರಿಸ್ (ಔಟಾಗದೇ 13) ಆಸ್ಟ್ರೇಲಿಯಾಗೆ ಉತ್ತಮ ಆರಂಭ ಒದಗಿಸಿದ್ದು, ಇತ್ತೀಚಿನ ವರದಿಗಳು ಬಂದಾಗ ಆಸ್ಟ್ರೇಲಿಯಾ 8 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 28 ರನ್ ಗಳಿಸಿತ್ತು. ಭಾರತದ ಪರ ಜಸ್ಪ್ರೀತ್ ಬೂಮ್ರಾ ಮತ್ತು ಇಶಾಂತ್ ಶರ್ಮಾ ದಾಳಿ ಆರಂಭಿಸಿದರು.
Next Story