ಭಾರತ-ಆಸ್ಟ್ರೇಲಿಯ ಏಕದಿನ ಸರಣಿ

ಕಳಪೆ ದಾಖಲೆಗೆ ಪಾತ್ರವಾದ ಕುಲದೀಪ್ ಯಾದವ್

ದಿಲ್ಲಿ, ಮಾ.14: ಇಲ್ಲಿಯ ಫಿರೋಝ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ್ದ 35 ರನ್‌ಗಳಿಂದ ಸೋಲುವುದರೊಂದಿಗೆ ಭಾರತ ಸರಣಿಯನ್ನು 2-3 ರಿಂದ ಕಳೆದುಕೊಂಡಿತ್ತು. ಆರಂಭದಲ್ಲಿ 2-0 ಯಿಂದ ಮುಂದಿದ್ದ ಪ್ರವಾಸಿಗರಿಗೆ ಸರಣಿ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಲವು ಆಟಗಾರರು ಕಳಪೆ ಪ್ರದರ್ಶನದ ಮೂಲಕ ಸುದ್ದಿಯಾಗಿದ್ದಾರೆ. 2019ರ ವಿಶ್ವಕಪ್‌ಗೆ ಸಮಯ ಹತ್ತಿರವಿರುವ ಸಂದರ್ಭದಲ್ಲಿ ಆತಿಥೇಯ ತಂಡದ ಈ ಸೋಲು ದಿಗ್ಭ್ರಮೆ ಮೂಡಿಸಿದೆ. ಹಲವು ಆಟಗಾರರು ತಮ್ಮ ನಿರೀಕ್ಷೆಗೆ ತಕ್ಕ ಆಟವಾಡುವಲ್ಲಿ ವಿಫಲರಾಗಿದ್ದಾರೆ. ಅಂತಹವರಲ್ಲಿ ಕುಲದೀಪ್ ಯಾದವ್ ಕೂಡ ಒಬ್ಬರು. ಆಸ್ಟ್ರೇಲಿಯ ತಂಡದ ದಾಂಡಿಗರ ಎದುರು ಅವರ ಪ್ರದರ್ಶನ ನಿರಾಸೆ ಮೂಡಿಸಿದೆ.

ಸಂಪೂರ್ಣ ಐದು ಪಂದ್ಯಗಳಲ್ಲಿ ಕಾಣಿಸಿಕೊಂಡ ಕುಲದೀಪ್ 50 ಓವರ್‌ಗಳ ಬೌಲಿಂಗ್ ಕೋಟಾವನ್ನು ಪೂರ್ಣಗೊಳಿಸಿದರೂ ಅವುಗಳಲ್ಲಿ ಒಂದೇ ಒಂದು ಓವರ್ ಮೇಡನ್ ಇರಲಿಲ್ಲ. ಅಲ್ಲದೆ 30.20ರ ಸರಾಸರಿಯಲ್ಲಿ ಅವರು 302 ರನ್‌ಗಳನ್ನು ಎದುರಾಳಿ ತಂಡಕ್ಕೆ ಬಿಟ್ಟುಕೊಟ್ಟಿದ್ದರು. ಸರಣಿಯಲ್ಲಿ ಒಟ್ಟು 10 ವಿಕೆಟ್‌ಗಳನ್ನು ಗಳಿಸಿದ್ದರೂ ತಮ್ಮ ಜೀವನಶ್ರೇಷ್ಠ ಬೌಲಿಂಗ್‌ನ ಹತ್ತಿರಕ್ಕೆ ಸುಳಿಯಲಿಲ್ಲ. ವಿಶ್ವಕಪ್ ಪಂದ್ಯಾವಳಿಗೆ ಇನ್ನು ಎರಡೇ ತಿಂಗಳಿರುವ ಸಮಯದಲ್ಲಿ ಯಾದವ್ ತಮ್ಮ ಅತ್ಯುತ್ತಮ ಪ್ರದರ್ಶನಕ್ಕೆ ಮರಳಬೇಕಿದೆ. 2019ರ ವಿಶ್ವಕಪ್ ಮೇ 30ರಂದು ಇಂಗ್ಲೆಂಡ್‌ನಲ್ಲಿ ಆರಂಭವಾಗಲಿದ್ದು, ಜು.14ರಂದು ಲಾರ್ಡ್ಸ್‌ನಲ್ಲಿ ಫೈನಲ್ ಪಂದ್ಯ ನಡೆಯಲಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top