ಪುಣೆ ತಂಡಕ್ಕೆ ಪ್ಲೆಸಿಸ್ ಬದಲಿಗೆ ಉಸ್ಮಾನ್ ಖ್ವಾಜಾ
ಪುಣೆ, ಎ.29: ಆಸ್ಟ್ರೇಲಿಯದ ಬ್ಯಾಟಿಂಗ್ ಸ್ಟಾರ್ ಉಸ್ಮಾನ್ ಖ್ವಾಜಾ ಗಾಯಗೊಂಡಿರುವ ದಕ್ಷಿಣ ಆಫ್ರಿಕದ ಆಟಗಾರ ಎಫ್ಡು ಪ್ಲೆಸಿಸ್ ಬದಲಿಗೆ ರೈಸಿಂಗ್ ಪುಣೆ ಸೂಪರ್ಜಯಂಟ್ಸ್ ತಂಡದಲ್ಲಿ ಆಡಲಿದ್ದಾರೆ.
ಕಳೆದ ಪಂದ್ಯದಲ್ಲಿ ನಮ್ಮ ತಂಡದ ಪ್ರಮುಖ ಆಟಗಾರ ಪ್ಲೆಸಿಸ್ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ದಕ್ಷಿಣ ಆಫ್ರಿಕಕ್ಕೆ ವಾಪಸಾಗಿದ್ದಾರೆ. ಅವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ. ಉಸ್ಮಾನ್ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸಂತೋಷವಾಗುತ್ತಿದೆ. ಅವರ ಉಪಸ್ಥಿತಿಯು ತಂಡಕ್ಕೆ ಖಂಡಿತವಾಗಿಯೂ ಲಾಭವಾಗಲಿದೆ ಎಂದು ಪುಣೆ ಕೋಚ್ ಸ್ಟೀಫನ್ ಫ್ಲೆಮಿಂಗ್ ತಿಳಿಸಿದ್ದಾರೆ.
ಆಸ್ಟ್ರೇಲಿಯದ ಆರಂಭಿಕ ದಾಂಡಿಗ ಖ್ವಾಜಾ ಆಸ್ಟ್ರೇಲಿಯದ ದೇಶೀಯ ಟ್ವೆಂಟಿ-20 ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಇತ್ತೀಚೆಗೆ ನಡೆದ ಟ್ವೆಂಟಿ-20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು
Next Story