ರಬಾಡಗೆ ಒಂದು ಟೆ ಸ್ಟ್ ಪಂದ್ಯ ನಿಷೇಧ
ಇಂಗ್ಲೆಂಡ್ನ ರೂಟ್ ಜೊತೆ ಅನುಚಿತ ವರ್ತನೆ
ಪೋರ್ಟ್ ಆಫ್ ಸ್ಪೇನ್, ಜ.17: ಸೈಂಟ್ ಜಾರ್ಜ್ ಪಾರ್ಕ್ನಲ್ಲಿ ಗುರುವಾರ ನಡೆದ ಮೂರನೇ ಟೆಸ್ಟ್ನ ಮೊದಲ ದಿನ ಇಂಗ್ಲೆಂಡ್ನ ಜೋ ರೂಟ್ ವಿಕೆಟ್ ಪಡೆದ ಸಂಭ್ರಮಾಚರಣೆಯ ವೇಳೆ ಅನುಚಿತವಾಗಿ ವರ್ತಿಸಿ ಮತ್ತೊಮ್ಮೆ ಡಿಮೆರಿಟ್ ಪಾಯಿಂಟ್ ಪಡೆದಿರುವ ದಕ್ಷಿಣ ಆಫ್ರಿಕಾದ ಪ್ರಮುಖ ವೇಗದ ಬೌಲರ್ ಕಾಗಿಸೊ ರಬಾಡ ಒಂದು ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂಗ್ಲೆಂಡ್ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಪಂದ್ಯಕ್ಕೆ ಲಭ್ಯವಿರುವುದಿಲ್ಲ.
ರೂಟ್ ಜೊತೆ ಅಸಭ್ಯವಾಗಿ ವರ್ತಿಸಿ ಐಸಿಸಿ ನೀತಿ ಸಂಹಿತೆ ಲೆವೆಲ್-1ನ್ನು ಉಲ್ಲಂಘಿಸಿರುವ ರಬಾಡ ಪಂದ್ಯಶುಲ್ಕದಲ್ಲಿ ಶೇ.15ರಷ್ಟು ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ಪಡೆದಿದ್ದಾರೆ ಎಂದು ಐಸಿಸಿ ಪ್ರಕಟನೆಯೊಂದರಲ್ಲಿ ತಿಳಿಸಿದೆ. ರಬಾಡ 24 ತಿಂಗಳುಗಳಲ್ಲಿ ನಾಲ್ಕು ಡಿಮೆರಿಟ್ ಪಾಯಿಂಟ್ಸ್ ಗಳಿಸಿದ್ದು, ದಕ್ಷಿಣ ಆಫ್ರಿಕಾ ತಂಡ ಜೋಹಾನ್ ್ಸಬರ್ಗ್ನಲ್ಲಿ ಆಡಲಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ.
Next Story