ಪಾಕ್-ಬಾಂಗ್ಲಾ 3ನೇ ಟ್ವೆಂಟಿ-20 ಪಂದ್ಯ ಮಳೆಗಾಹುತಿ
ಲಾಹೋರ್, ಜ.27: ಪಾಕ್-ಬಾಂಗ್ಲಾದೇಶ ನಡುವೆ ಸೋಮವಾರ ಇಲ್ಲಿ ನಡೆಯಬೇಕಾಗಿದ್ದ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಅಂತರ್ರಾಷ್ಟ್ರೀಯ ಪಂದ್ಯ ಭಾರೀ ಮಳೆಯಿಂದಾಗಿ ರದ್ದಾಗಿದೆ.
ಆತಿಥೇಯ ಪಾಕ್ ತಂಡ 3 ಪಂದ್ಯಗಳ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಜಯಿಸುವುದರೊಂದಿಗೆ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ. ಪಾಕಿಸ್ತಾನ ಫೆ.7ರಂದು ರಾವಲ್ಪಿಂಡಿಯಲ್ಲಿ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಎ.5ರಂದು ಕರಾಚಿಯಲ್ಲಿ ಎರಡನೇ ಟೆಸ್ಟ್ ನಡೆಯಲಿದೆ. ಉಭಯ ತಂಡಗಳ ನಡುವೆ ಏಕೈಕ ಏಕದಿನ ಪಂದ್ಯ ನಡೆದ ಎರಡು ದಿನಗಳ ಬಳಿಕ ಟೆಸ್ಟ್ ಪಂದ್ಯ ನಡೆಯಲಿದೆ.
Next Story