ಕಾರು ಅಪಘಾತ: ಅಪಾಯದಿಂದ ಪಾರಾದ ವಿಂಡೀಸ್ ವೇಗಿ ಥಾಮಸ್
ಜಮೈಕಾ, ಫೆ.18: ವೆಸ್ಟ್ಇಂಡೀಸ್ನ ವೇಗದ ಬೌಲರ್ ಒಶಾನೆ ಥಾಮಸ್ ಕಾರು ಅಪಘಾತವೊಂದರಲ್ಲಿ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ರವಿವಾರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಥಾಮಸ್ರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಗಳವಾರ 23ನೇ ವಯಸ್ಸಿಗೆ ಕಾಲಿಟ್ಟಿರುವ ಥಾಮಸ್ ವೆಸ್ಟ್ಇಂಡೀಸ್ನ ಪರ 20 ಏಕದಿನ ಹಾಗೂ 10 ಟ್ವೆಂಟಿ-20 ಅಂತರ್ರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ್ದಾರೆ. ರವಿವಾರ ಜಮೈಕಾದಲ್ಲಿ ನಡೆದಿದ್ದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ವೇಗದ ಬೌಲರ್ ಥಾಮಸ್ ಶೀಘ್ರವಾಗಿ ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ ಎಂದು ವೆಸ್ಟ್ ಇಂಡೀಸ್ ಆಟಗಾರರ ಸಂಸ್ಥೆ ಪ್ರಕಟನೆಯೊಂದರಲ್ಲಿ ತಿಳಿಸಿದೆ.
Next Story