ಒಲಿಂಪಿಕ್ಸ್ನಲ್ಲಿ ಪದಕ ಗೆದ್ದವರಿಗೆ ಖೇಲ್ ರತ್ನ, ಅರ್ಜುನ ಪ್ರಶಸ್ತಿ
ಹೊಸದಿಲ್ಲಿ, ಮೇ 24: ಮುಂಬರುವ ರಿಯೋ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಕ್ರೀಡಾ ಪಟುಗಳಿಗೆ ಈ ವರ್ಷದ ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ಗೆ ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.
ಈ ನಿರ್ಧಾರದಿಂದಾಗಿ ರಿಯೋ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದರೂ ಪ್ರಶಸ್ತಿಗಾಗಿ ಒಂದು ವರ್ಷ ಕಾಯಬೇಕಾಗಿದೆ.
ತಂಡಕ್ಕೆ ಪದಕ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದವರನ್ನು ಹಿಂದೆ ಪರಿಗಣಿಸಿರಲಿಲ್ಲ. ಮುಂಬರುವ ಲಿಯೋ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲು ಪ್ರಮುಖ ಕೊಡುಗೆ ನೀಡಿದವರನ್ನು ಅಂದರೆ ಗರಿಷ್ಠ ಗೋಲು ದಾಖಲಿಸಿದವರನ್ನು ಅತೀ ಹೆಚ್ಚು ಗೋಲು ತಡೆದ ಗೋಲು ಕೀಪರ್ನ್ನು ಅರ್ಜುನ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.
ಈ ಹಿಂದೆ ರಾಜೀವ್ ಗಾಂಧಿ ಖೇಲ್ರತ್ನ ಅಥವಾ ಅರ್ಜುನ ಪ್ರಶಸ್ತಿಗೆ ಕ್ರೀಡಾಪಟುಗಳ ನಾಲ್ಕು ವರ್ಷಗಳ ಸಾಧನೆಯನ್ನು ಪರಿಗಣಿಸಲಾಗುತ್ತಿತ್ತು.
Next Story