ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್
ದುಬೈ: ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಮೊದಲ ಸ್ವತಂತ್ರ ಅಧ್ಯಕ್ಷ ಶಶಾಂಕ್ ಮನೋಹರ್ ತನ್ನ ಸ್ಥಾನದಿಂದ ಬುಧವಾರ ಕೆಳಗಿಳಿದಿದ್ದಾರೆ.
ಮನೋಹರ್ ಅವರು 2015ರ ನವಂಬರ್ನಲ್ಲಿ ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಇದೀಗ ತೆರವಾಗಿರುವ ಸ್ಥಾನಕ್ಕೆ ಹಾಂಗ್ಕಾಂಗ್ ಮೂಲದ ಇಮ್ರಾನ್ ಖ್ವಾಜಾ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಉತ್ತರಾಧಿಕಾರಿ ಆಯ್ಕೆ ತನಕ ಖ್ವಾಜಾ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಐಸಿಸಿ ಪ್ರಕಟನೆ ತಿಳಿಸಿದೆ. ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಮುಂದಿನ ವಾರದೊಳಗೆ ಐಸಿಸಿ ಮಂಡಳಿ ಅನುಮೋದನೆ ನೀಡುವ ನಿರೀಕ್ಷೆಯಿದೆ. ಮಾಜಿ ಇಸಿಬಿ ಅಧ್ಯಕ್ಷ ಕಾಲಿನ್ ಗ್ರೇವ್ಸ್ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಸ್ಪರ್ಧಿಳಾಗಿ ಕಾಣಿಸಿಕೊಂಡಿದ್ದಾರೆ.
Next Story