ಐಪಿಎಲ್: ಚೆನ್ನೈಗೆ 176 ರನ್ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್
ಪೃಥ್ವಿ ಶಾ ಅರ್ಧಶತಕ
ದುಬೈ, ಸೆ.25: ಆರಂಭಿಕ ಆಟಗಾರ ಪೃಥ್ವಿ ಶಾ ಅರ್ಧಶತಕದ ಕೊಡುಗೆಯ ನೆರವಿನಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಟ್ವೆಂಟಿ-20 ಟೂರ್ನಿಯ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿಗೆ 176 ರನ್ ಗುರಿ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಡೆಲ್ಲಿ ತಂಡ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ಗಳ ನಷ್ಟಕ್ಕೆ 175 ರನ್ ಗಳಿಸಿತು.
ಶಿಖರ್ ಧವನ್((35 ರನ್, 27 ಎಸೆತ)ಅವರೊಂದಿಗೆ ಇನಿಂಗ್ಸ್ ಆರಂಭಿಸಿದ ಶಾ ಮೊದಲ ವಿಕೆಟ್ಗೆ 10.4 ಓವರ್ಗಳಲ್ಲಿ 94 ರನ್ ಜೊತೆಯಾಟ ನಡೆಸಿ ಉತ್ತಮ ಆರಂಭ ಒದಗಿಸಿದರು. 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದ ಶಾ 64 ರನ್ ಗಳಿಸಿ ಪಿಯೂಷ್ ಚಾವ್ಲಾಗೆ ವಿಕೆಟ್ ಒಪ್ಪಿಸಿದರು. ಧವನ್ 35 ರನ್ ಗಳಿಸಿ ಚಾವ್ಲಾಗೆ ಎರಡನೇ ಬಲಿಯಾದರು.
ಆರಂಭಿಕ ಆಟಗಾರರಿಬ್ಬರು ಔಟಾದ ಬಳಿಕ ನಾಯಕ ಶ್ರೇಯಸ್ ಅಯ್ಯರ್(26) ಹಾಗೂ ರಿಷಭ್ ಪಂತ್(ಔಟಾಗದೆ 37)ಮೂರನೇ ವಿಕೆಟ್ಗೆ 58 ರನ್ ಜೊತೆಯಾಟದಲ್ಲಿ ಪಾಲ್ಗೊಂಡು ತಂಡದ ಮೊತ್ತವನ್ನು ಹಿಗ್ಗಿಸಿದರು.
Next Story