ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ - ಅರ್ಜಿ ಆಹ್ವಾನ
ಮಂಗಳೂರು, ಅ.22: ದ.ಕ. ಜಿಲ್ಲಾ ಸರಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಶಾಲೆಯಲ್ಲಿ 2018-19ನೇ ಸಾಲಿನ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗಾಗಿ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಅವಧಿ 24 ತಿಂಗಳಾಗಿದ್ದು, 17ರಿಂದ 30ರ ವಯೋಮಾನದ ದ್ವಿತೀಯ ಪಿಯುಸಿಯಲ್ಲಿ ಕನ್ನಡವನ್ನು ಒಂದು ಐಚ್ಚಿಕ ವಿಷಯವಾಗಿ ತೆಗೆದುಕೊಂಡು ಪಾಸಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ನಮೂನೆಯನ್ನು www.karhfw.gov.in ವೆಬ್ಸೈಟ್ ಹೋಮ್ಪೇಜ್ ಎಡಭಾಗದಲ್ಲಿ (SIHFW) ನಲ್ಲಿ ಡೌನ್ಲೋಡ್ ಮಾಡಿಕೊಂಡು ಪಡೆದುಕೊಳ್ಳಬಹುದಾಗಿದೆ. ವೇಳಾಪಟ್ಟಿಯನ್ನು ವೆಬ್ಸೈಟ್ನಲ್ಲಿ/ ಈ ಕಚೇರಿ ನೋಟಿಸ್ ಬೋರ್ಡಿನಲ್ಲಿ ಪರಿಶೀಲಿಸಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ದ.ಕ. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ದ.ಕ. ಮಂಗಳೂರು ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.31ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟನೆ ತಿಳಿಸಿದೆ.