ಪ್ರಧಾನಿ ಮೋದಿ ನಾಳೆ ಮಂಗಳೂರಿಗೆ
ಮಂಗಳೂರು, ಡಿ.17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ರಾತ್ರಿ 7 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿರುವ ಮೋದಿ ಡಿ.19ರಂದು ಲಕ್ಷದ್ವೀಪಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿದ್ದಾರೆ.
ಗುಜರಾತ್ ನ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ದಿನವೇ ಪ್ರಧಾನಿ ಮೋದಿ ಮಂಗಳೂರಿನಲ್ಲಿರುವುದು ವಿಶೇಷ.
Next Story