ವಡೋದರದ ರಾಸಾಯನಿಕ ಸ್ಥಾವರದಲ್ಲಿ ಅಗ್ನಿ ಅವಘಢ
ಹೊಸದಿಲ್ಲಿ, ಜ.9: ಗುಜರಾತ್ ನ ವಡೋದರದ ರಾಸಾಯನಿಕ ಸ್ಥಾವರವೊಂದರಲ್ಲಿ ಅಗ್ನಿ ಅವಘಢ ಸಂಭವಿಸಿರುವ ಘಟನೆ ನಡೆದಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ.
ಮಂಜುಸರ್ ನಲ್ಲಿರುವ ಕ್ಯಾಮ್ಕೋನ್ ರಾಸಾಯನಿಕ ಫ್ಯಾಕ್ಟರಿಯಲ್ಲಿ ಈ ಅವಘಡ ಸಂಭವಿಸಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ.
ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
Next Story