ಸಚಿವರ ಪುತ್ರ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಪೊಲೀಸ್ ಪೇದೆ ಮೃತ್ಯು
ಶಿಲ್ಲಾಂಗ್, ಎ.7: ಮೇಘಾಲಯದ ಆರೋಗ್ಯ ಸಚಿವ ಅಲೆಕ್ಸಾಂಡರ್ ಹೆಕ್ ಪುತ್ರ ಐಬನ್ಶರಾಯ್ ನೋಂಗ್ಸೆ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಪೊಲೀಸ್ ಪೇದೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ಜೈಲು ಅಧಿಕಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಮೃತ ಪೊಲೀಸ್ ಪೇದೆಯನ್ನು ಪ್ರೊಬತ್ ಆರ್. ಮರಕ್ ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಜೈಲು ಅಧಿಕಾರಿ ಪ್ರೊಬಿನ್ ಡಿ. ಸಾಂಗ್ಮಾ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯನ್ನು ದುರದೃಷ್ಟಕರ ಎಂದು ವ್ಯಾಖ್ಯಾನಿಸಿರುವ ಸಚಿವ ಹೆಕ್, ಈ ಬಗ್ಗೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆ ನಡೆಯಲಿ ಎಂದು ತಿಳಿಸಿದ್ದಾರೆ. ಸದ್ಯ ಜೈಲು ಅಧಿಕಾರಿ ಸ್ಥಿತಿ ಚಿಂತಾಜನಕವಾಗಿದ್ದು ಅವರ ಆರೋಗ್ಯಸ್ಥಿತಿಯಲ್ಲಿ ಚೇತರಿಕೆ ಕಂಡ ನಂತರ ಹೇಳಿಕೆ ಪಡೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story