ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರಕ್ಕೆ ಅಪಾಯವಿಲ್ಲ
ಶ್ರೀನಗರ, ಎ.14: ಜಮ್ಮು ಮತ್ತು ಕಾಶ್ಮೀರದ ಪಿಡಿಪಿ-ಬಿಜೆಪಿ ಸರಕಾರದಲ್ಲಿ ಎರಡೂ ಪಕ್ಷಗಳು ಸಮನ್ವಯತೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದು ರಾಜ್ಯ ಸರಕಾರಕ್ಕೆ ಯಾವುದೇ ರೀತಿಯ ಅಪಾಯವಿಲ್ಲ ಎಂದು ಶನಿವಾರದಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ತಿಳಿಸಿದ್ದಾರೆ.
ಜಮ್ಮುವಿನಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಶಾಸಕರ ಸಭೆಯಲ್ಲಿ ಪಾಲ್ಗೊಳ್ಳಲು ಶನಿವಾರ ಆಗಮಿಸಿದ್ದ ವೇಳೆ ಅವರು ಈ ಮಾತನ್ನು ತಿಳಿಸಿದ್ದಾರೆ. ನಾವು ಪಕ್ಷದ ಶಾಸಕರ ಜೊತೆ ಮಾತುಕತೆ ನಡೆಸಲಿದ್ದೇವೆ ಮತ್ತು ರಾಜಿನಾಮೆ ನೀಡಿರುವ ಇಬ್ಬರು ಸಚಿವರ ಜೊತೆಗೂ ಸಮಾಲೋಚನೆ ನಡೆಸಲಿದ್ದೇವೆ ಎಂದು ಮಾಧವ್ ತಿಳಿಸಿದ್ದಾರೆ. ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮುಂದಿನ ನಡೆಯ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಶನಿವಾರದಂದು ಶ್ರೀನಗರದಲ್ಲಿ ತಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿದ್ದಾರೆ.
Next Story