ದೋಷಾರೋಪ ಪಟ್ಟಿ ಸಲ್ಲಿಸಲು ತಡೆದ 8 ವಕೀಲರ ವಿರುದ್ಧ ಪ್ರಕರಣ ದಾಖಲು
ಕಥುವಾ ಅತ್ಯಾಚಾರ, ಕೊಲೆ ಪ್ರಕರಣ
ಜಮ್ಮು, ಎ.17: ಕಥುವಾ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕ್ರೈಂ ಬ್ರಾಂಚ್ ಅಧಿಕಾರಿಗಳು ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸದಂತೆ ತಡೆದ ಎಂಟು ವಕೀಲರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪರ ಪ್ರತಿಭಟನೆ ನಡೆಸಿ ಪೊಲೀಸರು ತಮ್ಮ ಕೆಲಸ ನಿರ್ವಹಿಸಲು ಅವಕಾಶ ನೀಡದ ಪ್ರಕರಣದಲ್ಲಿ ಎಪ್ರಿಲ್ 10ರಂದು ಡಜನ್ಗಟ್ಟಲೆ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ತನಿಖೆಯ ವೇಳೆ ಪ್ರಕರಣದಲ್ಲಿ ಮತ್ತೆ ಎಂಟು ವಕೀಲರ ಪಾತ್ರವು ಸ್ಪಷ್ಟವಾದ ಕಾರಣ ಅವರ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದ್ದು ಇನ್ನಷ್ಟು ಹೆಸರುಗಳು ಎಫ್ಐಆರ್ಗೆ ಸೇರಬಹುದಾದ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story