ಸೇತುವೆಯಿಂದ ಕೆಳಕ್ಕೆ ಬಿದ್ದ ಮಿನಿ ಟ್ರಕ್: 20 ಮಂದಿ ಮೃತ್ಯು
ಮಧ್ಯ ಪ್ರದೇಶ, ಎ.18: ಮಿನಿ ಟ್ರಕ್ಕೊಂದು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ 20 ಮಂದಿ ಮೃತಪಟ್ಟು 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಸಿಧಿಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇವರೆಲ್ಲರೂ ತೆರಳುತ್ತಿದ್ದರು. ಸಿಧಿಯಲ್ಲಿರುವ ಸೇತುವೆಯಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಸುಮಾರು 100 ಅಡಿ ಕೆಳಕ್ಕೆ ಟ್ರಕ್ ಬಿದ್ದಿದ್ದು, 15 ಮಂದಿ ಸ್ಥಳದಲ್ಲೇ ಮೃತಪಟ್ಟರೆ ಉಳಿದವರಿಗೆ ಗಂಭೀರ ಗಾಯಗಳಾಗಿತ್ತು.
ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದೆ. ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನೊಳಗೆ ಇನ್ನೂ ಹಲವರು ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Next Story