ವರದಕ್ಷಿಣೆ ನೀಡದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಕರೀಮ್ನಗರ, ಎ.23: ವಿವಾಹ ನಡೆದ ಮೂರೇ ದಿನಗಳ ಬಳಿಕ ವರದಕ್ಷಿಣೆಗಾಗಿ ಸ್ನೇಹಿತರೊಂದಿಗೆ ಸೇರಿ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಕ್ಷಿಣೆಯಾಗಿ ಚಿನ್ನಾಭರಣ ನೀಡುವಂತೆ ಪತಿ ಬೇಡಿಕೆ ಒಡ್ಡಿದ್ದ. ಆತನ ಬೇಡಿಕೆ ಈಡೇರಿಸಲು ಸಾಧ್ಯವಾಗದಿದ್ದಾಗ ಎಪ್ರಿಲ್ 17ರಂದು ಗೆಳೆಯರೊಂದಿಗೆ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಕರೀಂಗಂಜ್ನಲ್ಲಿರುವ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ತೆರಳಿದ ಸಂದರ್ಭ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ದೂರು ಆಧರಿಸಿ ಎಪ್ರಿಲ್ 20ರಂದು ಪ್ರಕರಣ ದಾಖಲಿಸಲಾಗಿದೆ. ಮಹಿಳೆಯ ಪತಿಯ ಸ್ನೇಹಿತರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story