ಎನ್ ಕೌಂಟರ್ ಗೆ ಐವರು ಉಗ್ರರು ಬಲಿ
ಶ್ರೀನಗರ,ಮೇ 6: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾಪಡೆಗಳು ಕೈಗೊಂಡ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಕೊಲ್ಲಲಾಗಿದೆ.
ದಕ್ಷಿಣ ಕಾಶ್ಮೀರದ ಝೈನಪುರದ ಬಡಿಗ್ಯಾಮ್ ಗ್ರಾಮದಲ್ಲಿ ಖಚಿತ ವರ್ತಮಾನದ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದಾಗ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು ಎನ್ನಲಾಗಿದೆ. ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಮೃತಪಟ್ಟರು. ಅಡಗಿಕೊಂಡಿರುವ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್ ಪಿ ವಹೀದ್ ತಿಳಿಸಿದ್ದಾರೆ.
Next Story