ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿತ: 12 ಮಂದಿ ಮೃತ್ಯು
ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ವಾರಣಾಸಿ, ಮೇ 15: ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಒಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಹಲವರು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ವಾರಣಾಸಿಯ ಕಾನ್ಟ್ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ನ 2 ಪಿಲ್ಲರ್ ಗಳು ಕುಸಿದಿದ್ದು, ಕಾಂಕ್ರಿಟ್ ಸ್ಲ್ಯಾಬ್ ನೆಲಕ್ಕೆ ಬಿದ್ದಿದೆ. ಪರಿಣಾಮ ಫ್ಲೈ ಓವರ್ ಕೆಳಗಿದ್ದ ಕಾರು, ಬಸ್ ನಜ್ಜುಗುಜ್ಜಾಗಿದೆ.
ಅವಶೇಷಗಳಡಿ ಸಿಲುಕಿರುವ ಹಲವರು ಫ್ಲೈ ಓವರ್ ನಿರ್ಮಾಣ ಕಾರ್ಮಿಕರು ಎಂದು ತಿಳಿದುಬಂದಿದೆ.
Next Story