ವಾಜಪೇಯಿ ಆರೋಗ್ಯ ಸ್ಥಿರ
ಹೊಸದಿಲ್ಲಿ, ಜೂ.12: ವಯೋಸಹಜ ಕಾಯಿಲೆಯ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ವಾಜಪೇಯಿ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದ್ದು, . ಡಾ.ರಣದೀಪ್ ಗುಲೇರಿಯಾ ಅವರ ನೇತೃತ್ವದ ವೈದ್ಯರ ತಂಡ ವಾಜಪೇಯಿ ಅವರ ಆಗೋಗ್ಯದ ನಿಗಾವಹಿಸಿದ್ದಾರೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story