ರಾಹುಲ್ಗೆ ಪ್ರಧಾನಿ ಹುಟ್ಟುಹಬ್ಬದ ಶುಭ ಕೋರಿದ್ದು ಹೀಗೆ…
ಹೊಸದಿಲ್ಲಿ, ಜೂ.19: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ 48ನೇ ಹುಟ್ಟುಹಬ್ಬದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಷಯಗಳು. ದೇವರು ಅವರಿಗೆ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ನಿವಾಸದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಹಾಗೂ ‘ಆಪ್’ ಪಕ್ಷದ ನಾಯಕರು ನಡೆಸುತ್ತಿರುವ ಧರಣಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೋದಿಯನ್ನು ಟೀಕಿಸಿ ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಸಂದೇಶ ಕಳುಹಿಸಿದ ಸ್ವಲ್ಪ ಹೊತ್ತಿನ ಬಳಿಕ ರಾಹುಲ್ಗೆ ಹುಟ್ಟುಹಬ್ಬದ ಶುಭಾಷಯ ಕೋರಿ ಮೋದಿ ಟ್ವೀಟ್ ಮಾಡಿದ್ದಾರೆ.
ಹುಟ್ಟುಹಬ್ಬದ ಶುಭಾಷಯ ಸಲ್ಲಿಸಿರುವ ಹಲವು ಮುಖಂಡರು- “ಹ್ಯಾಪಿ ಬರ್ತ್ಡೇ ರಾಹುಲ್ ಗಾಂಧಿ”.. ಎಂದು ಸಂದೇಶ ಕಳುಹಿಸಿದ್ದರೆ, ಮೋದಿಯವರ ಸಂದೇಶ ವಿಭಿನ್ನವಾಗಿದೆ. ಕಳೆದ ವರ್ಷದ ಸೆಪ್ಟೆಂಬರ್ 17ರಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿಯವರೂ ಶುಭಾಷಯ ಸಲ್ಲಿಸಿದ್ದರು.