ಕಾಶ್ಮೀರದ ಪುಲ್ವಮಾದಲ್ಲಿ ಮೂವರು ಉಗ್ರರ ಹತ್ಯೆ
ಶ್ರೀನಗರ, ಜೂ.20: ಜಮ್ಮು ಮತ್ತು ಕಾಶ್ಮೀರದ ಪುಲ್ವಮಾ ಜಿಲ್ಲೆಯ ಟ್ರಲೆರಿಯಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಜೈಶ್ -ಇ-ಮುಹಮ್ಮದ್ (ಜೆಎಂ) ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರು ಮೃತಪಟ್ಟಿದ್ದಾರೆ. ಓರ್ವ ಸಿಆರ್ ಪಿಎಫ್ ಸಿಬಂದಿ ಮತ್ತು ನಾಲ್ವರು ಭದ್ರತಾ ಪಡೆಯ ಯೋಧರು ಗಾಯಗೊಂಡಿದ್ದಾರೆ.
ಮಂಗಳವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಆರಂಭಗೊಂಡಿತ್ತು. ಕೊಲ್ಲಲ್ಪಟ್ಟ ಮೂವರು ಉಗ್ರರಲ್ಲಿ ಓರ್ವ ಪಾಕಿಸ್ತಾನದ ನಿವಾಸಿ ಮತ್ತು ಇಬ್ಬರು ಸ್ಥಳೀಯ ನಿವಾಸಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಓರ್ವ ಸಿಆರ್ ಪಿಎಫ್ ಮತ್ತು ನಾಲ್ವರು ಯೋಧರು ಗಾಯಗೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story