ಹೊಸದಿಲ್ಲಿ, ಜು.1: ದಿಲ್ಲಿ-ಎನ್ ಸಿಆರ್, ಉತ್ತರ ಪ್ರದೇಶ ಹಾಗು ಹರ್ಯಾಣ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ರಿಕ್ಟರ್ ಮಾಪಕದಲ್ಲಿ 4.0 ಭೂಕಂಪನದ ತೀವ್ರತೆ ದಾಖಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.