ಮಗುವಿನ ಅಪಹರಣದ ಶಂಕೆಯಲ್ಲಿ ಇಬ್ಬರಿಗೆ ಥಳಿಸಿದ ಗುಂಪು
ಚೆನ್ನೈ, ಜು.2: ಮಗುವೊಂದನ್ನು ಅಪಹರಿಸಲು ಯತ್ನಿಸಿದ್ದಾರೆ ಎನ್ನುವ ಶಂಕೆಯಲ್ಲಿ ಗುಂಪೊಂದು ಇಬ್ಬರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿರುವ ಚೆನ್ನೈಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದ ಸಂದೇಶಗಳನ್ನು ನಂಬಿ ಗುಂಪು ಹತ್ಯೆ ನಡೆಯುತ್ತಿರುವ ಇತ್ತೀಚಿನ ಘಟನೆಗಳ ನಡುವೆಯೇ ಈ ಘಟನೆ ನಡೆದಿದೆ.
ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಿರುವ ಪೊಲೀಸರು ಇತರರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಚೆನ್ನೈ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಕ್ಕಳ ಕಳ್ಳರೆಂಬ ಶಂಕೆಯಲ್ಲಿ ಐವರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಿನ್ನೆ ಮಹಾರಾಷ್ಟ್ರದ ಧುಲೆ ಎಂಬಲ್ಲಿ ನಡೆದಿತ್ತು.
Next Story