ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು
ಹೊಸದಿಲ್ಲಿ, ಜು.5: ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿಗೆ ಸಂಬಂಧಿಸಿ ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದಿಲ್ಲಿ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಮಧ್ಯಾಂತರ ನಿರೀಕ್ಷಣಾ ಜಾಮೀನು ನೀಡಿದೆ.
1 ಲಕ್ಷ ರೂ. ಶ್ಯೂರಿಟಿ ಪಡೆದು ತರೂರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ತರೂರು ವಿದೇಶಕ್ಕೆ ತೆರಳುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
Next Story