ಆಕ್ಷೇಪಾರ್ಹ ಸಂದೇಶ: ಪೊಲೀಸ್ ಅಧಿಕಾರಿ ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲು
ಲಕ್ನೊ, ಜು.೬: ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ ಆರೋಪದಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಹಾರನ್ಪುರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಇನ್ಸ್ಪೆಕ್ಟರ್ ನರೇಂದ್ರ ಕುಮಾರ್ ಹಾಗೂ ವಾಟ್ಸ್ಆ್ಯಪ್ ಗುಂಪಿನ ಎಡ್ಮಿನ್ ಅರ್ಷದ್ ರಾಣಾರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧೀಕ್ಷಕ(ನಗರ) ಓಂಬೀರ್ ಸಿಂಗ್ ತಿಳಿಸಿದ್ದಾರೆ. ನಿರ್ದಿಷ್ಟ ಸಮುದಾಯವೊಂದರ ಧಾರ್ಮಿಕ ಭಾವನೆಗೆ ಘಾಸಿಯಾಗುವ ರೀತಿಯ ಸಂದೇಶವನ್ನು ವಾಟ್ಸ್ಆ್ಯಪ್ನಲ್ಲಿ ಪ್ರಸಾರ ಮಾಡಲಾಗಿದೆ ಎಂದು ನಗರದ ನಿವಾಸಿ ಇಸ್ರಾರ್ ಆಲಿ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story