ಆರೆಸ್ಸೆಸ್ ಮುಖ್ಯಸ್ಥರೊಂದಿಗೆ ವೇದಿಕೆ ಹಂಚಿಕೊಳ್ಳಲಿರುವ ರತನ್ ಟಾಟಾ
ಹೊಸದಿಲ್ಲಿ, ಜು.10: ಆಗಸ್ಟ್ನಲ್ಲಿ ಮುಂಬೈಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಖ್ಯಾತ ಉದ್ಯಮಿ ರತನ್ ಟಾಟಾ ಅವರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಆರೆಸ್ಸೆಸ್ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಆರೆಸ್ಸೆಸ್ ಪ್ರಚಾರಕರಾಗಿದ್ದ ನಾನಾ ಪಾಲ್ಕರ್ ಅವರ ಜನ್ಮಶತಮಾನೋತ್ಸವ ಆಚರಣೆ ಸಮಾರೋಪ ಸಮಾರಂಭದ ಅಂಗವಾಗಿ ನಾನಾ ಪಾಲ್ಕರ್ ಸ್ಮೃತಿ ಸಮಿತಿ ಎಂಬ ಎನ್ಜಿಒ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರತನ್ ಟಾಟಾ ಪಾಲ್ಗೊಳ್ಳಲಿದ್ದಾರೆ. ಮುಂಬೈಯಲ್ಲಿರುವ ಟಾಟಾ ಸ್ಮಾರಕ ಆಸ್ಪತ್ರೆಯ ಬಳಿಯಲ್ಲಿರುವ ಪಾಲ್ಕರ್ ಸ್ಮೃತಿ ಸಮಿತಿಯ ಕಚೇರಿಯ ಮೂಲಕ ಕ್ಯಾನ್ಸರ್ ರೋಗಿಗಳಿಗೆ ಸಹಾಯ ಮಾಡಲಾಗುತ್ತಿದ್ದು ರತನ್ ಟಾಟಾ ಅವರು ಕಚೇರಿಗೆ ಭೇಟಿ ನೀಡಿದ್ದು ಸಂಸ್ಥೆಯ ಸಮಾಜಸೇವಾ ಕಾರ್ಯದ ಬಗ್ಗೆ ತಿಳಿದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜೂನ್ನಲ್ಲಿ ನಾಗ್ಪುರದಲ್ಲಿ ನಡೆದಿದ್ದ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪಾಲ್ಗೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.