ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಹೊಸದಿಲ್ಲಿ, ಜು.16: ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್ ನ ನಿಧಿಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ.
ಈ ದುರುಪುಯೋಗಗಳು ನಡೆದಾಗ ಅಬ್ದುಲ್ಲಾ ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷರಾಗಿದ್ದರು. ಆ ಅವಧಿಯಲ್ಲಿ 113 ಕೋಟಿ ರೂ.ಗಳ ದುರುಪಯೋಗ ನಡೆದಿತ್ತು ಎಂದು ಆರೋಪಿಸಲಾಗಿದೆ.
ಚಾರ್ಜ್ ಶೀಟ್ ನಲ್ಲಿ ಅಬ್ದುಲ್ಲಾ ಜೊತೆ ಆಗಿನ ಜಮ್ಮು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ಸಲೀಂ ಖಾನ್, ಖಜಾಂಚಿ ಮುಹಮ್ಮದ್ ಅಹ್ಸಾನ್ ಮಿರ್ಝಾ ಹಾಗು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಎಕ್ಸಿಕ್ಯುಟಿವ್ ಬಶೀರ್ ಅಹ್ಮದ್ ಮನ್ಸೀರ್ ಅವರ ಹೆಸರಿದೆ.
Next Story