ಕನ್ಹಯ್ಯಾ ಕುಮಾರ್ ಮೇಲೆ ಜೆಎನ್ಯು ವಿಧಿಸಿದ ದಂಡ ರದ್ದುಗೊಳಿಸಿದ ಹೈಕೋರ್ಟ್
ಹೊಸದಿಲ್ಲಿ, ಜು. 20: ಕಾರ್ಯಕ್ರಮವೊಂದರಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಡಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ಗೆ ಮೇಲ್ಮನವಿ ಪ್ರಾಧಿಕಾರ ವಿಧಿಸಿದ ದಂಡವನ್ನು ದಿಲ್ಲಿ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಕಾನೂನಿಗೆ ಅನುಗುಣವಾಗಿ ಹೊಸದಾಗಿ ವಿಚಾರಣೆ ನಡೆಸುವಂತೆ ಉಚ್ಚ ನ್ಯಾಯಾಲಯ ಮೇಲ್ಮನವಿ ಪ್ರಾಧಿಕಾರಕ್ಕೆ ನ್ಯಾಯಮೂರ್ತಿ ಸಿದ್ಧಾರ್ಥ ಮೃದುಲು ಅವರು ಸೂಚಿಸಿದ್ದಾರೆ.
Next Story