ಶಾಲೆಯಲ್ಲಿ ನೀಡಿದ ಮಾತ್ರೆ ಸೇವಿಸಿ ಬಾಲಕಿ ಮೃತ್ಯು: ಆರೋಪ
100 ಮಕ್ಕಳು ಅಸ್ವಸ್ಥ
ಮುಂಬೈ, ಆ.10: ಶಾಲೆಯಲ್ಲಿ ನೀಡಿದ್ದ ಮಾತ್ರೆ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾಗಿದ್ದು, ಅಸ್ವಸ್ತಗೊಂಡ 100 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ಗೋವಂಡಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
12 ವರ್ಷದ ಚಾಂದಿನಿ ಸಾಹಿಲ್ ಶೇಖ್ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಶಾಲೆಯ ಸುಮಾರು 100 ಮಕ್ಕಳನ್ನು ಇಲ್ಲಿನ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ ನೀಡಿದ್ದ ಮಾತ್ರೆಗಳ ಸೇವನೆಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದರು ಎಂದು ಆರೋಪಿಸಲಾಗಿದೆ.
ಮಕ್ಕಳು ದಾಖಲಾಗಿರುವ ಆಸ್ಪತ್ರೆಯ ಹೊರಭಾಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Next Story