ನನ್ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಹೈಕೋರ್ಟ್ ನಕಾರ
ತಿರುವನಂತಪುರ, ಸೆ.13: ಕೇರಳದ ನನ್ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕಾದ ಆವಶ್ಯಕತೆ ಇಲ್ಲ ಎಂದು ಕೇರಳದ ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.
ಜಲಂಧರ್ ಬಿಷಪ್ ಫ್ರಾಂಕೊ ಮುಲಾಕಲ್ ವಿರುದ್ಧ ನನ್ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಬಂಧಿಸಬೇಕೆ ಅಥವಾ ಬೇಡವೇ ಎನ್ನುವ ವಿಚಾರವನ್ನು ಪೊಲೀಸರು ನಿರ್ಧರಿಸುತ್ತಾರೆ.
ಈ ಪ್ರಕರಣದ ಸ್ವತಂತ್ರ ತನಿಖೆ ಅಗತ್ಯ . ಪೊಲೀಸರು ಆರೋಪಕ್ಕೆ ಸಂಬಂಧಿಸಿ ಸಾಕ್ಷ್ಯಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
Next Story