ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡಿಗೆ 7 ಉಗ್ರರು ಬಲಿ
ಶ್ರೀನಗರ, ಸೆ.13: ಜಮ್ಮು ಮತ್ತು ಕಾಶ್ಮೀರದದಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸಂಭವಿಸಿದ ಗುಂಡಿನ ಚಕಮಕಿ ಪ್ರಕರಣಗಳಲ್ಲಿ 7 ಮಂದಿ ಉಗ್ರರು ಮೃತಪಟ್ಟಿದ್ದಾರೆ.ಭದ್ರತಾ ಪಡೆಯ 8 ಮಂದಿ ಯೋಧರು ಗಾಯಗೊಂಡಿದ್ದಾರೆ.
ಗಡಿ ನಿಯಂತ್ರಣಾ ರೇಖೆಯ ಸಮೀಪದ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಕುಪ್ವಾರ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ರಿಯಾಸಿ ಮತ್ತು ಸೊಪೊರೆ ಎಂಬಲ್ಲಿ ತಲಾ ಇಬ್ಬರು ಉಗ್ರರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿರುವ 5 ಮಂದಿ ಸಿಆರ್ ಪಿಎಫ್ ಸಿಬ್ಬಂದಿಗಳು, ಓರ್ವ ಪೊಲೀಸ್ ಉಪಾಧೀಕ್ಷಕ ಸೇರಿದಂತೆ 8 ಮಂದಿಯನ್ನು ಕತ್ರಾದ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story