ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯಿ ನೇಮಕ
ಅಕ್ಟೋಬರ್ 3ರಂದು ಗೊಗೋಯಿ ಪ್ರಮಾಣ
ಹೊಸದಿಲ್ಲಿ, ಸೆ.13: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರು ನೇಮಕಗೊಂಡಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅಕ್ಟೋಬರ್ 2ರಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೊಗೋಯಿರನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನಾಯಮೂರ್ತಿಯಾಗಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ.
ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಕೇಂದ್ರ ಸರಕಾರಕ್ಕೆ ಇತ್ತೀಚೆಗೆ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಗೊಗೋಯಿ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು
ಅಕ್ಟೋಬರ್ 3ರಂದು ಗೊಗೋಯಿ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2019 ನವೆಂಬರ್ 17ರ ತನಕ ಗೊಗೋಯಿ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರದಲ್ಲಿರುತ್ತಾರೆ.
Next Story