ಶಾಲೆಯ ಶೌಚಾಲಯದಲ್ಲಿ 6 ವರ್ಷದ ಬಾಲಕಿಯ ಮೃತದೇಹ ಪತ್ತೆ
ಅತ್ಯಾಚಾರ ನಡೆಸಿ ಕೊಲೆ: ಪ್ರಾಥಮಿಕ ವರದಿ
ಲಕ್ನೋ, ಸೆ.22: ಶಾಲೆಯೊಂದರ ಶೌಚಾಲಯದಲ್ಲಿ ಅರೆನಗ್ನ ಸ್ಥಿತಿಯಲ್ಲಿ 6 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯನ್ನು ಅತ್ಯಾಚಾರಗೈಯಲಾಗಿದೆ ಎನ್ನುವುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದು ಗೊಂಡಾ ಎಸ್ಪಿ ಮಾಹಿತಿ ನೀಡಿದ್ದಾರೆ. ಇಲ್ಲಿನ ಬಸನಾತಪುರ ಗ್ರಾಮದ ಪ್ರಾಥಮಿಕ ಶಾಲೆಯ ಶೌಚಾಲಯದಲ್ಲಿ ಮೃತದೇಹ ಪತ್ತೆಯಾಗಿದೆ.
ಘಟನೆಗೆ ಸಂಬಂಧಿಸಿ ಕೆಲ ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಸಂಬಂಧಿಕರೊಬ್ಬರ ಮನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಕಿ ತನ್ನ ಅಜ್ಜ-ಅಜ್ಜಿಯೊಂದಿಗೆ ಆಗಮಿಸಿದ್ದಳು. ಗುರುವಾರದಿಂದ ಆಕೆ ನಾಪತ್ತೆಯಾಗಿದ್ದಳು ಎನ್ನಲಾಗಿದೆ. ಶನಿವಾ ಆಕೆಯ ಮೃತದೇಹ ಲಭಿಸಿದೆ.
Next Story