ಸಿಕ್ಕಿಂನ ಮೊದಲ ವಿಮಾನ ನಿಲ್ದಾಣ ಉದ್ಘಾಟನೆ
ಗ್ಯಾಂಗ್ಟಾಕ್, ಸೆ.24: ಸಿಕ್ಕಿಂ ರಾಜ್ಯದ ಪಕ್ಯೊಂಗ್ ನ್ಯೂ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು.
ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್ ನಿಂದ 30 ಕಿಮೀ ದೂರದಲ್ಲಿರುವ ಈ ವಿಮಾನ ನಿಲ್ದಾಣವನ್ನು 605.59 ಕೋಟಿ ರು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಅಕ್ಟೋಬರ್ 4 ರಿಂದ ಕಮರ್ಷಿಯಲ್ ವಿಮಾನಗಳು ಈ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಲಿವೆ
2009ರಲ್ಲಿ ವಿಮಾಣ ನಿಲ್ದಾಣ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿತ್ತು. 9 ವರ್ಷಗಳ ಬಳಿಕ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದೆ. ಭಾರತದ 100ನೇ ವಿಮಾನ ನಿಲ್ದಾಣವಾಗಿದೆ.
Next Story